Google News-KN | Google News-EN | Telegram |
ಮಂಡ್ಯದ ಒಕ್ಕಲಿಗ ವೀರರು ಎಂದು ಬಿಂಬಿಸಲಾಗುತ್ತಿರುವ ಉರಿಗೌಡ- ನಂಜೇಗೌಡ ಹೆಸರಿನಲ್ಲಿ ಸಿನಿಮಾವೊಂದು ಮೂಡಿ ಬರಲಿದೆ.
ಹಲವು ದಿನಗಳಿಂದ ಈ ಹೆಸರು ವಿವಾದಕ್ಕೆ ಕಾರಣವಾಗಿದ್ದರೂ, ಈ ವೀರರ ಕುರಿತಾಗಿ ಸಿನಿಮಾ ಮಾಡಲು ಮುಂದಾಗಿದ್ದಾರೆ ತೋಟಗಾರಿಕ ಸಚಿವ ಮುನಿರತ್ನ. ಈ ಸಿನಿಮಾ ಮಾಡಲೆಂದು ಅವರು ಎರಡು ಟೈಟಲ್ ಅನ್ನು ರಿಜಿಸ್ಟರ್ ಕೂಡ ಮಾಡಿಸಿದ್ದಾರೆ.
ಕುರುಕ್ಷೇತ್ರ ಸೇರಿದಂತೆ ಹಲವು ಭಾರೀ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಮುನಿರತ್ನ, ಈ ಬಾರಿ ವಿವಾದಿದ ವ್ಯಕ್ತಿಗಳ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈ ಚಿತ್ರಕ್ಕೆ ‘ಉರಿಗೌಡ –ನಂಜೇಗೌಡ’ ಅಥವಾ ‘ನಂಜೇಗೌಡ-ಉರಿಗೌಡ’ ಎನ್ನುವ ಹೆಸರನ್ನೂ ಇಡಲಿದ್ದಾರೆ.
ನಿನ್ನೆಯಷ್ಟೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಶೀರ್ಷಿಕೆ ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.