ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ದೋಷಿ: ಹಿನ್ನೆಲೆ ಆಧರಿಸಿ ಶಿಕ್ಷ ಪ್ರಮಾಣ ಪ್ರಕಟಿಸಲಿರುವ ಕೋರ್ಟ್ | Azad Times

2 weeks ago 4
Google News-KN Google News-EN Telegram Facebook

Azad Times News Desk.

ಕೋಮು ಪ್ರಚೋದನೆ ಭಾಷಣ ಮಾಡಿದ ಪ್ರಕರಣದಲ್ಲಿ ಆಂದೋಲದ ಕರುಣೇಶ್ವರ ಮಠದ ಪೀಠಾಧಿಪತಿ ಹಾಗೂ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ದೋಷಿ ಎಂದು ಕೋರ್ಟ್​ ತೀರ್ಪು ನೀಡಿದೆ.

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿದ್ದ ಆರೋಪದ ಮೇಲೆ 2015ರಲ್ಲಿ ಆಂದೋಲಾ ಶ್ರೀ ವಿರುದ್ಧ ಕೇಸ್ ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಯಾದಗಿರಿಯ ಸಿವಿಲ್ ಕೋರ್ಟ್ ನ್ಯಾಯಾಧೀಶ ರವೀಂದ್ರ ಹೊನೋಲೆ​ ಅವರು, ಸಿದ್ದಲಿಂಗ ಸ್ವಾಮಿಯನ್ನು ದೋಷಿ ಎಂದು ತೀರ್ಪು ನೀಡಿದರು.

ದೋಷಿಯ ಹಿನ್ನಲೆಯ ವರದಿ ನೀಡುವಂತೆ ಪ್ರೊಬೇಷನರಿ ಅಧಿಕಾರಿಗಳಿಗೆ ತಿಳಿಸಿದ್ದು, ವರದಿ ಮೇಲೆ ಶಿಕ್ಷೆಯ ಪ್ರಮಾಣ ನಿರ್ಧಾರವಾಗಲಿದೆ.

2015ರ ಜನವರಿ 2ರಂದು ಯಾದಗಿರಿ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ವಿಶ್ವ ಹಿಂದೂ ಪರಿಷತ್ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಕೋಮು ಪ್ರಚೋದನೆ ಭಾಷಣ ಮಾಡಿದ್ದರು.

ಈ ಬಗ್ಗೆ ಯಾದಗಿರಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಾಗಿಸಿಕೊಂಡಿದ್ದ ಯಾದಗಿರಿ ನಗರ ಠಾಣೆ ಪೊಲೀಸರು IPC ಕಲಂ 153 (ಎ), 295ರ ಅಡಿಯಲ್ಲಿ ಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

Google News-KN Google News-EN Telegram Facebook
HTML smaller font

Azad Times.

Disclaimer: This story is auto-aggregated by a Syndicated Feed and has not been created or edited By Azad Times Staff.

This is the title of the web page
This is the title of the web page