Google News-KN | Google News-EN | Telegram |
ಮಾಜಿ ಸಿಎಂ ಸಿದ್ದರಾಮಯ್ಯ ದಲಿತ ವಿರೋಧಿ ಅಲ್ಲ ಎಂದು ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ಸಂಸದ ಮುನಿಸ್ವಾಮಿ ಸುಳ್ಳು ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಿದ್ದರಿಂದ ಅಪಮಾನ ತಾಳಲಾರದೇ ದಲಿತ ಮುಖಂಡರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೋಲಾರದಲ್ಲಿ ನಡೆದಿದೆ.
ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಕೆಎಂ ಸಂದೇಶ್ ಆತ್ಮಹತ್ಯೆಗೆ ಯತ್ನಿಸಿದ್ದು, ಜಾಲಪ್ಪ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದಾರೆ.
ಇತ್ತೀಚೆಗೆ ದೇವರನ್ನು ಮುಟ್ಟಿದ ಬಾಲಕನಿಗೆ ದಂಡ ಹಾಕಿದ ಪ್ರಕರಣದಲ್ಲಿ ಹೋರಾಟ ನಡೆಸಿದ್ದ ಸಂದೇಶ್, ಅನ್ಯಾಯಕ್ಕೆ ಒಳಗಾಗಿದ್ದ ದಲಿತ ಮಹಿಳೆಗೆ ನ್ಯಾಯ ಕೊಡಿಸಲು ಮುಂದಾಗಿದ್ದರು. ಆದರೆ ಯುವಕನ ಅಪಹರಣ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲಾಗಿತ್ತು. ಅಲ್ಲದೇ ರೋಲ್ ಕಾಲ್ ಆರೋಪಗಳನ್ನು ಮಾಡಲಾಗಿತ್ತು.
ಬಿಜೆಪಿ ಸಂಸದ ಮುನಿಸ್ವಾಮಿ ತಮ್ಮ ವಿರುದ್ಧ ಸುಳ್ಳು ಕೇಸ್ ದಾಖಲಿಸಲಾಗಿತ್ತು ಎಂದು ಹೇಳಲಾಗಿದ್ದು, ನನ್ನನ್ನು ಕಿಡ್ನಾಪ್ ಮಾಡಲಾಗಿಲ್ಲ ಎಂದು ಯುವಕ ನ್ಯಾಯಾಲಯಕ್ಕೆ ಮುಚ್ಚಳಿಕೆ ಬರೆದುಕೊಟ್ಟ ಹಿನ್ನೆಲೆಯಲ್ಲಿ ಸಂದೇಶ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.
ಜಾಮೀನಿನ ಮೇಲೆ ಹೊರಗೆ ಬಂದರೂ ಕಿರುಕುಳ ನೀಡಿದ್ದರಿಂದ ನೊಂದ ಸಂದೇಶ್ ಆತ್ಮಹತ್ಯೆಗೆ ಯತ್ನಿಸಿದ್ದರು. ಡೆತ್ ನೋಟ್ ನಲ್ಲಿ ನಾನು ಯಾರಿಗೂ ರೋಲ್ ಕಾಲ್ ಮಾಡಿಲ್ಲ. ಈಗಲೂ ನನ್ನ ಬಳಿ ಸ್ವಂತ ಮನೆ ಇಲ್ಲ. ಒಂದು ಗುಂಟೆ ಜಮೀನು ಇಲ್ಲ. ಕಷ್ಟ ಅಂತ ಯಾರೂ ಕರೆ ಮಾಡಿದರೂ ಅವರ ನೆರವಿಗೆ ಹೋಗುತ್ತಿದ್ದೆ. ಆದರೆ ನನ್ನ ಮೇಲೆ ಸುಳ್ಳು ಕೇಸ್ ದಾಖಲಿಸಿ ಅಪಮಾನ ಮಾಡಲಾಗಿದೆ ಎಂದು ಸಂದೇಶ್ ಬರೆದಿಟ್ಟಿದ್ದಾರೆ.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.