Google News-KN | Google News-EN | Telegram |
ರನ್ ಬರ ಎದುರಿಸುವ ಮೂಲಕ ಟೀಕೆಗೆ ಗುರಿಯಾಗಿದ್ದ ಕರ್ನಾಟಕದ ಕೆಎಲ್ ರಾಹುಲ್ ಮಹತ್ವದ ಅರ್ಧಶತಕ ಸಿಡಿಸಿ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 5 ವಿಕೆಟ್ ಜಯ ತಂದುಕೊಟ್ಟಿದ್ದಾರೆ. ಈ ಮೂಲಕ ಏಕದಿನ ಸರಣಿಯಲ್ಲಿ 1-0 ಮುನ್ನಡೆಯ ಗೌರವ ತಂದುಕೊಟ್ಟಿದ್ದಾರೆ.
ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವನ್ನು 35.4 ಓವರ್ ಗಳಲ್ಲಿ 188 ರನ್ ಗೆ ಆಲೌಟ್ ಮಾಡಿದ ಭಾರತ ತಂಡ 39.5 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.
ಮಿಚೆಲ್ ಸ್ಟಾರ್ಕ್ ಮಾರಕ ದಾಳಿಗೆ ತತ್ತರಿಸಿದ ಭಾರತ 39 ರನ್ ಗೆ 4 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತದಿಂದ ತತ್ತರಿಸಿತು. ಆದರೆ ನಾಯಕ ಹಾರ್ದಿಕ್ ಪಟೇಲ್ ಮತ್ತು ಕೆಎಲ್ ರಾಹುಲ್ 5ನೇ ವಿಕೆಟ್ ಗೆ 44 ರನ್ ಜೊತೆಯಾಟ ನಿಭಾಯಿಸಿ ತಂಡವನ್ನು ಕುಸಿತದಿಂದ ಪಾರು ಮಾಡಿದರು. ಹಾರ್ದಿಕ್ ಪಟೇಲ್ 31 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಸೇರಿದ 25 ರನ್ ಬಾರಿಸಿ ಔಟಾದರು.
ಕೆಎಲ್ ರಾಹುಲ್ ತಾಳ್ಮೆಯಿಂದ ಇನಿಂಗ್ಸ್ ಕಟ್ಟಿದರು. ಅಲ್ಲದೇ ಅರ್ಧಶತಕ ಬಾರಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ರಾಹುಲ್ ಪಾಲಿಗೆ ಇದು 13ನೇ ಏಕದಿನ ಅರ್ಧಶತಕವಾಗಿದೆ.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.