Google News-KN | Google News-EN | Telegram |
200 ಯೂನಿಟ್ ಗಳ ಒಳಗೆ ವಿದ್ಯುತ್ ಬಳಕೆ ಮಾಡುವ ಬಿಲ್ ಕಟ್ಟುವ ಅಗತ್ಯವಿಲ್ಲ. ಬಾಡಿಗೆದಾರರಿಗೂ ಇದು ಅನ್ವಯವಾಗುತ್ತದೆ. ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಇದು ಅನ್ವಯಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಡಿಗೆದಾರರಿಗೂ 200 ಯೂನಿಟ್ ವಿದ್ಯುತ್ ಉಚಿತವಾಗಿ ದೊರೆಯಲಿದೆ. ಅವರು 50, 70 ಅಥವಾ 200 ಯೂನಿಟ್ ಬಳಸುತ್ತಿದ್ದರೆ ಅವರಿಗೂ ಅನ್ವಯವಾಗಲಿದೆ ಎಂದರು.
ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ 41 ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಇದೇ ವೇಳೆ ಇಂಧನ ಸಚಿವ ಕೆಜೆ ಜಾರ್ಜ್ ಮಾತನಾಡಿ, ಬಾಡಿಗೆದಾರರು ಉಚಿತವಾಗಿ ವಿದ್ಯುತ್ ಪಡೆಯಬೇಕಾದರೆ ಅರ್ಜಿ ಸಲ್ಲಿಸಬೇಕು. ಅರ್ಜಿಯಲ್ಲಿ ನಾವು ಎಷ್ಟು ಸಮಯದಿಂದ ಬಾಡಿಗೆ ಇದ್ದೇವೆ ಎಂಬುದಕ್ಕೆ ರೆಂಟ್ ಅಗ್ರಿಮೆಂಟ್ ಸೇರಿದಂತೆ ಕೆಲವು ದಾಖಲೆಗಳನ್ನು ನೀಡಬೇಕು. ಮತ್ತು ಮನೆ ಮಾಲೀಕರು ಕೂಡ ಎಷ್ಟು ಬಾಡಿಗೆ ಮನೆಗಳಿವೆ. ಮಾಲೀಕ ಆಸ್ತಿ ತೆರಿಗೆ ಪಾವತಿರಬೇಕು ಎಂಬುದನ್ನು ತೋರಿಸಬೇಕು ಎಂದು ಸ್ಪಷ್ಟಪಡಿಸಿದರು.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.