Google News-KN | Google News-EN | Telegram |
ಪ್ರಯಾಣಿಕರ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಆಳವಾದ ಕಂದಕಕ್ಕೆ ಬಿದ್ದ ಪರಿಣಾಮ 30 ಮಂದಿ ಮೃತಪಟ್ಟು 15 ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದಲ್ಲಿ ಸಂಭವಿಸಿದೆ.
ಇಸ್ಲಾಮಾದಾನದ್ ಸಮೀಪದ ಖೈಬರ್ ಪಖ್ತುಂಖ್ವಾದ ಕೊಹಿಸ್ತಾನ್ ಜಿಲ್ಲೆಯ ಕಾರಕೋರಂ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಆಗಿದ್ದು, ವಾಹನಗಳು ಕಂದರಕ್ಕೆ ಉರುಳಿ ಬಿದ್ದಿವೆ.
ಬಸ್ ಗಿಲ್ಗಿಟ್ನಿಂದ ರಾವಲ್ಪಿಂಡಿಗೆ ಹೋಗುತ್ತಿದ್ದಾಗ ಶಿಥಿಯಾಲ್ ಪ್ರದೇಶದಲ್ಲಿ ಎದುರುಗಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಬಸ್ ಮತ್ತು ಕಾರು ಎರಡೂ ಕಂದರಕ್ಕೆ ಉರುಳಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿದು ಪೊಲೀಸರು ಮತ್ತು ರಕ್ಷಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಪೊಲೀಸರು ಗಾಯಾಳುಗಳು ಹಾಗೂ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಭೀಕರ ರಸ್ತೆ ಅಪಘಾತಕ್ಕೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಶೋಕ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ ಅವರು, ಅಗಲಿದವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಜೊತೆಗೆ ಗಿಲ್ಗಿಟ್ ಬಾಲ್ಟಿಸ್ತಾನ್ ಮುಖ್ಯಮಂತ್ರಿ ಕೂಡ ಬಸ್ ಅಪಘಾತದ ಬಗ್ಗೆ ಸಂತಾಪ ಸೂಚಿಸಿದ್ದಾರೆ.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.