ಋತುಚಕ್ರದ ರಜೆ ನೀಡಿ ಕೇರಳ ಸರ್ಕಾರ ಆದೇಶ | Azad Times

4 months ago 10
Google News-KN Google News-EN Telegram Facebook

Azad Times News Desk.

ಸರ್ಕಾರದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ ನೀಡಿ ಕೇರಳ ಸರ್ಕಾರ ಆದೇಶ ಹೊರಡಿಸಿದೆ.

ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ಇಂತದೊಂದು ಮಹತ್ವದ ನಿರ್ಧಾರವನ್ನು ಸಿಎಂ ಪಿಣರಾಯಿ ವಿಜಯನ್ ತೆಗೆದುಕೊಂಡಿದ್ದಾರೆ.

ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ, ವಿದ್ಯಾರ್ಥಿಗಳಿಗಿರುವ 75% ಹಾಜರಾತಿಯನ್ನು ವಿದ್ಯಾರ್ಥಿನಿಯರಿಗಾಗಿ 73% ಇಳಿಕೆ ಮಾಡಿದೆ. ಇದಲ್ಲದೆ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿನಿಯರು 60 ದಿನಗಳ ಗರ್ಭಧಾರಣೆಯ ರಜೆಯನ್ನು ಪಡೆಯಬಹುದು ಎಂದು ಆದೇಶದಲ್ಲಿ ಉಲ್ಲೇಖಿಸಿದೆ.

ಸರ್ಕಾರದ ಆದೇಶದ ಬೆನ್ನಲ್ಲೆ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (ಕುಸಾಟ್) ನಿಯಮ ಜಾರಿ ಮಾಡಿದೆ. ಈ ಬಗ್ಗೆ ಉನ್ನತ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯದ ರಾಜ್ಯ ಸಚಿವ ಆರ್ ಬಿಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ರಾಜ್ಯಾದ್ಯಂತ ಇರುವ ವಿಶ್ವವಿದ್ಯಾನಿಲಯಗಳಲ್ಲಿ ಇದೇ ರೀತಿಯ ನೀತಿಯನ್ನು ಜಾರಿಗೆ ತರಲು ರಾಜ್ಯವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಬಗ್ಗೆ ಟ್ವೀಟ್ ಮಾಡಿ, ಮುಟ್ಟಿನ ರಜೆ ನಿರ್ಧಾರದ ಮೂಲಕ ಮತ್ತೊಮ್ಮೆ ಕೇರಳವು ರಾಷ್ಟ್ರಕ್ಕೆ ಮಾದರಿಯಾಗಿದೆ ಮತ್ತು ಪ್ರಸ್ತುತ ನಿರ್ಧಾರವು ಲಿಂಗ ನ್ಯಾಯಯುತ ಸಮಾಜವನ್ನು ಸಾಕಾರಗೊಳಿಸುವ ಎಡ ಪ್ರಜಾಸತ್ತಾತ್ಮಕ ರಂಗ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸುತ್ತದೆ ಎಂದು ಹೇಳಿದ್ದರು.

Google News-KN Google News-EN Telegram Facebook
HTML smaller font

Azad Times.

Disclaimer: This story is auto-aggregated by a Syndicated Feed and has not been created or edited By Azad Times Staff.

This is the title of the web page
This is the title of the web page