Google News-KN | Google News-EN | Telegram |
ಕರಾವಳಿ ಭಾಗದ ಸಾಂಸ್ಕೃತಿಕ, ದೇಗುಲ ಪ್ರವಾಸೋದ್ಯಮಕ್ಕೆ ಇಂಬು ಕೊಡುವ ಮಾಸ್ಟರ್ ಪ್ಲಾನ್ ರೂಪಿಸಿ ಇಲ್ಲಿನ ಆರ್ಥಿಕತೆಗೆ ಉತ್ತೇಜನ ನೀಡಲು ಅವಕಾಶಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕಾರ್ಕಳದ ಬೈಲೂರಿನ ಉಮಿಕಲ್ ಬೆಟ್ಟದ ಮೇಲೆ ಸ್ಥಾಪಿಸಿರುವ ಪರಶುರಾಮನ ಮೂರ್ತಿಯನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಪ್ರವಾಸೊದ್ಯಮಕ್ಕೆ ವಿಪುಲ ಅವಕಾಶಗಳು ಕರಾವಳಿಯಲ್ಲಿವೆ. ಈಗಾಗಲೇ ಪ್ರವಾಸೋದ್ಯಮಕ್ಕೆ ಹಲವಾರು ಯೋಜನೆಗಳನ್ನು ರೂಪಿಸಲಾಗಿದೆ ಎಂದರು.
ಕರಾವಳಿಯಲ್ಲಿ ಕೈಗಾರಿಕೋದ್ಯಮದ ಅಗತ್ಯವೂ ಇದೆ. ಇದಕ್ಕೆ ಮೂಲಭೂತ ಸೌಕರ್ಯಗಳ ಅಗತ್ಯವಿದೆ. ಬಂದರು, ಲಾಜಿಸ್ಟಿಕ್ ಪಾರ್ಕ್, ರಸ್ತೆ ಸಂಪರ್ಕ ಆದಾಗ ಸಮಗ್ರ ಅಭಿವೃದ್ದಯಾಗುತ್ತದೆ. ಈಗಾಗಲೇ ಕರಾವಳಿಯಲ್ಲಿ ಸುಮಾರು ಒಂದೂವರೆ ಲಕ್ಷ ಕೋಟಿ ರೂ.ಗಳ ಬಂಡವಳ ಹೂಡಲು ಮುಂದೆ ಬಂದಿದ್ದಾರೆ ಎಂದು ಅವರು ಹೇಳಿದರು.
ಇಂಧನ, ಹೈಡ್ರೋಜನ್, ಅಮೋನಿಯಾ ಉತ್ಪಾದನೆಗೆ ಜನ ಮುಂದಾಗಿದ್ದಾರೆ. ಇದನು ಆದಷ್ಟು ಶೀಘ್ರವಾಗಿ ನನಸು ಮಾಡಿದರೆ, ಇಲ್ಲಿನ ಜನರ ಬದುಕು ಸಂಪೂರ್ಣವಾಗಿ ಬದಲಾಗುತ್ತದೆ. ಅಷ್ಟು ವಿಪುಲ ಅವಕಾಶ ಇಲ್ಲಿವೆ. ಕರಾವಳಿಗೆ ಸಣ್ಣಪುಟ್ಟ ಪ್ಯಾಕೇಜ್ ನೀಡಿದರೆ ಬದುಕು ಬದಲಾಗುವುದಿಲ್ಲ. ನಮ್ಮ ಬಂದರುಗಳ ಸಾಮರ್ಥ್ಯ ಹೆಚ್ಚಾಗಬೇಕು, ಹೂಡಿಕೆ ಹೆಚ್ಚಾದರೆ, ದೊಡ್ಡ ಪ್ರಾಮಾಣದ ಆರ್ಥಿಕ ಚಟುವಟಿಕೆಗಳು ನಡೆದು ಅಭಿವೃದ್ದಿಯಾಗುತ್ತದೆ. ಬದುಕು ಕಟ್ಟಿಕೊಡುವುದು ನಮ್ಮ ಸರ್ಕಾರದ ಗುರಿ. ಪ್ಯಾಕೇಜ್ ಕೊಡುವುದಲ್ಲ ಎಂದರು.
ಐತಿಹಾಸಿಕ ದಿನ
ಕರ್ನಾಟಕಕ್ಕೆ, ವಿಶೇಷವಾಗಿ ಕರಾವಳಿಗೆ ಐತಿಹಾಸಿಕ ದಿನವಿದು. ಪರಶುರಾಮನ ಥೀಮ್ ಪಾರ್ಕ್ ಹಾಗೂ ಅತ್ಯಂತ ಎತ್ತರದ ಸ್ಥಾನದಲ್ಲಿ ಪರಶುರಾಮನ ಮೂರ್ತಿ ಸ್ಥಾಪನೆಯಾಗಿರುವುದು ಇತಿಹಾಸ ಸೃಷಿಸಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ಸುನೀಲ್ ಕುಮಾರ್, ಮೀನುಗಾರಿಕೆ ಸಚಿವ ಎಸ್.ಅಂಗಾರ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಶಾಸಕರಾದ ಲಾಲಾಜಿ ಮೆಂಡನ್. ರಘುಪತಿ ಭಟ್, ನಟ, ನಿರ್ದೇಶಕ ರಿಷಭ್ ಶೆಟ್ಟಿ ಉಪಸ್ಥಿತರಿದ್ದರು.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.