ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್: ಸಿಎಂ ಬೊಮ್ಮಾಯಿ ಕಾರ್ಯಕ್ರಮ ರದ್ದು! | Azad Times

1 month ago 4
Google News-KN Google News-EN Telegram Facebook

Azad Times News Desk.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದು ಮುಹೂರ್ತ ಫಿಕ್ಸ್ ಆಗಲಿರುವ ಹಿನ್ನೆಲೆಯಲ್ಲಿ ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯಕ್ರಮಗಳು ರದ್ದುಗೊಳ್ಳುವ ಸಾಧ್ಯತೆ ಇದೆ.

ಕೇಂದ್ರ ಚುನಾವಣಾ ಆಯೋಗ ಇಂದು ಬೆಳಿಗ್ಗೆ 11.30ಕ್ಕೆ ಚುನಾವಣಾ ದಿನಾಂಕ ಘೋಷಣೆ ಮಾಡಲಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ.

ಚುನಾವಣಾ ದಿನಾಂಕ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದಿನಕ್ಕೊಂದು ಯೋಜನೆ, ದಿನಕ್ಕೊಂದು ಜಿಲ್ಲೆಗೆ ಪ್ರವಾಸ, ಅಭಿವೃದ್ಧಿ ಕಾಮಗಾರಿಗಳ ಜಾರಿ ಕಾರ್ಯಕ್ರಮಗಳನ್ನು ಪ್ರಕಟಿಸುತ್ತಿದ್ದ ಬೊಮ್ಮಾಯಿ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಿದ್ದಾರೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಭೇಟಿ ನೀಡುವ ಕಾರ್ಯಕ್ರಮ ರದ್ದಾಗಲಿದ್ದು, ಆದರೆ ಕಾರ್ಯಕ್ರಮ ಬದಲಿಗೆ ಪ್ರಚಾರ ಕಾರ್ಯಕ್ರಮದ ಅಂಗವಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ

Google News-KN Google News-EN Telegram Facebook
HTML smaller font

Azad Times.

Disclaimer: This story is auto-aggregated by a Syndicated Feed and has not been created or edited By Azad Times Staff.

This is the title of the web page
This is the title of the web page