Google News-KN | Google News-EN | Telegram |
ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುಹೂರ್ತ ಪ್ರಕಟಿಸಿರುವ ಕೇಂದ್ರ ಚುನಾವಣಾ ಆಯೋಗ ಮೇ ಮೊದಲ ವಾರದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಸಲು ತೀರ್ಮಾನಿಸಿದ್ದು, ಮೇ 10ರಂದು ಮತದಾನ ಹಾಗೂ ಮೇ 13ರಂದು ಮತ ಎಣಿಕೆ ನಡೆಯಲಿದೆ.
ಕೇಂದ್ರ ಚುನಾವಣಾ ಆಯೋಗ ಮುಖ್ಯಸ್ಥ ರಾಜೀವ್ ಕುಮಾ ದೆಹಲಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟಿಸಿದರು.
ರಾಜ್ಯದಲ್ಲಿ 5.22 ಕೋಟಿ ಮತದಾರರಿದ್ದು. ಇದರಲ್ಲಿ 2.31 ಲಕ್ಷ ಮಹಿಳಾ ಮತದಾರರು ಹಾಗೂ 2.62 ಲಕ್ಷ ಪುರುಷ ಮತದಾರರು ಇದ್ದಾರೆ. 12.3 ಲಕ್ಷ ಜನರು 18 ವರ್ಷ ಮೇಲ್ಪಟ್ಟರು ಮೊದಲ ಬಾರಿ ಮತದಾನ ಮಾಡಲಿದ್ದಾರೆ. ಕರ್ನಾಟಕದಲ್ಲಿ ವಿಕಲಚೇತನರು ಮತ್ತು ಹಿರಿಯ ನಾಗರಿಕರಿಂದ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ 58262 ಮತಗಟ್ಟೆಗಳನ್ನು ನಿರ್ಮಿಸಲಾಗುವುದು, 883 ಮತಗಳಿಗೆ ಒಂದು ಬೂತ್ ರಚಿಸಲಾಗುವುದು. 2040 ಮಹಿಳಾ ಬೂತ್ ನಿರ್ಮಿಸಲಾಗುವುದು. ಜೇನು ಕುರುಬ ಮತ್ತು ಬುಡಕಟ್ಟು ಜನಾಂಗಗಳಿಗೆ ಪ್ರತ್ಯೇಕ ಬೂತ್ ರಚಿಸಲಾಗುವುದು ಎಂದು ಅವರು ತಿಳಿಸಿದರು.
ಮೇ 24 ಕರ್ಮಾಟಕ ವಿಧಾನಸಭೆಯ ಅವಧಿ ಅಂತ್ಯಗೊಳ್ಳಲಿದೆ. ಮೇ ಮೊದಲ ವಾರದಲ್ಲಿ ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಬಿಜೆಪಿ ಅಧಿಕಾರ ಬಳಸಿಕೊಂಡು ಈ ಬಾರಿ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಪೂರ್ಣ ಪ್ರಮಾಣದಲ್ಲಿ ಮೊದಲ ಬಾರಿ ಅಧಿಕಾರ ಹಿಡಿಯುವ ಗುರಿ ಹೊಂದಿದ್ದರೆ, ಕಾಂಗ್ರೆಸ್ ಕೂಡ ಕೈ ತಪ್ಪಿ ಹೋಗಿದ್ದ ಅಧಿಕಾರವನ್ನು ಮರಳಿ ಪಡೆಯುವ ಉದ್ದೇಶ ಹೊಂದಿದೆ. ಜೆಡಿಎಸ್ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದಾರೆ.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.