Google News-KN | Google News-EN | Telegram |
ವಾರದ ಹಿಂದೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ಬೆಂಗಳೂರು ಮತ್ತು ಮೈಸೂರು ನಡುವಣ ಎಕ್ಸ್ ಪ್ರೆಸ್ ವೇ ಮಳೆಯಿಂದ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಕಳೆದೆರಡು ದಿನಗಳಿಂದ ಸುರಿದ ಭಾರೀ ಮಳೆ-ಗಾಳಿಯಿಂದ ರಾಮನಗರ ಜಿಲ್ಲೆಯ ಬಳಿ ರಸ್ತೆಗಳು ಮಳೆ ನೀರಿನಿಂದ ಮುಚ್ಚಿ ಹೋಗಿವೆ.
ಸುಮಾರು 8400 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಹೆದ್ದಾರಿ ಗುಣಮಟ್ಟದ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು, ಅತೀ ಹೆಚ್ಚು ಟೋಲ್ ಸಂಗ್ರಹದ ಬಗ್ಗೆಯೂ ಅಸಮಾಧಾನ ವ್ಯಕ್ತವಾಗಿತ್ತು. ಇದೀಗ ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಗಿದ್ದು, ಕಿಲೋಮೀಟರ್ ಗಟ್ಟಲೆ ಸಂಚಾರ ದಟ್ಟಣೆ ಉಂಟಾಗಿದೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನೀರು ನಿಂತ ವೀಡಿಯೋ ಹಾಗೂ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪ್ರಧಾನಿ ಮೋದಿ ಉದ್ಘಾಟಿಸುವ ಮುನ್ನ ಇದೆಲ್ಲಾ ಕಣ್ಣಿಗೆ ಬಿದ್ದಿರಲಿಲ್ವಾ? ಮೋದಿ ಕಣ್ಣಿಗೆ ಈಗಲಾದರೂ ಬಿದ್ದಿಲ್ವಾ ಎಂದು ಅವರು ಪ್ರಶ್ನಿಸಿದರು.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.