ಕೆಎಲ್ ರಾಹುಲ್ ಅರ್ಧಶತಕ ವ್ಯರ್ಥ: ಲಕ್ನೋ ವಿರುದ್ಧ ಪಂಜಾಬ್ ಗೆ 2 ವಿಕೆಟ್ ಜಯ | Azad Times

5 months ago 2
Google News-KN Google News-EN Telegram Facebook

Azad Times News Desk.

ನಾಯಕ ಕೆಎಲ್ ರಾಹುಲ್ ಅರ್ಧಶತಕದ ಹೊರತಾಗಿಯೂ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ನಾಯಕ ಶಿಖರ್ ಧವನ್ ಇಲ್ಲದೇ ಕಣಕ್ಕಿಳಿದಿದ್ದ ಪಂಜಾಬ್ ಕಿಂಗ್ಸ್ ತಂಡ 2 ವಿಕೆಟ್ ಗಳಿಂದ ಸೋಲಿಸಿದೆ.

ಲಕ್ನೋದಲ್ಲಿ ಶನಿವಾರ ನಡೆದ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 159 ರನ್ ಕಲೆ ಹಾಕಿತು. ಸಾಧಾರಣ ಗುರಿ ಬೆಂಬತ್ತಿದ ಪಂಜಾಬ್ ಕಿಂಗ್ಸ್ 19.3 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಪಂಜಾಬ್ ತಂಡ ಒಂದು ಹಂತದಲ್ಲಿ 75 ರನ್ ಗೆ 4 ವಿಕೆಟ್ ಕಳೆದುಕೊಂಡು ಆಘಾತಕ್ಕೆ ಒಳಗಾಯಿತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಸಿಕಂದರ್ ರಾಜ 41 ಎಸೆತದಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ಸೇರಿದ 57 ರನ್ ಗಳಿಸಿದರು. ಕೊನೆಯ ದಿನ ಶಾರೂಖ್ ಖಾನ್ 10 ಎಸೆತಗಳಲ್ಲಿ 1 ಬೌಂಡರಿ 2 ಸಿಕ್ಸರ್ ಸೇರಿದ ಅಜೇಯ 23 ರನ್ ಬಾರಿಸಿ ತಂಡಕ್ಕೆ ರೋಚಕ ಜಯ ತಂದುಕೊಟ್ಟರು.

Google News-KN Google News-EN Telegram Facebook
HTML smaller font

Azad Times.

Disclaimer: This story is auto-aggregated by a Syndicated Feed and has not been created or edited By Azad Times Staff.

This is the title of the web page
This is the title of the web page