Google News-KN | Google News-EN | Telegram |
ಆರಂಭಿಕ ಫಕರ್ ಜಮಾನ್ ಅಜೇಯ 180 ರನ್ ಹಾಗೂ ಸತತ 3ನೇ ಶತಕದ ನೆರವಿನಿಂದ ಪಾಕಿಸ್ತಾನ ತಂಡ 7 ವಿಕೆಟ್ ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಎರಡನೇ ಅತೀ ದೊಡ್ಡ ಮೊತ್ತವನ್ನು ಯಶಸ್ವಿಯಾಗಿ ಬೆಂಬತ್ತಿದ ದಾಖಲೆ ಬರೆಯಿತು.
ರಾವಲ್ಪಿಂಡಿಯಲ್ಲಿ ಶನಿವಾರ ತಡರಾತ್ರಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ ಡ್ರೈಲ್ ಮಿಚೆಲ್ ಶತಕದ ನೆರವಿನಿಂದ 50 ಓವರ್ ಗಳಲ್ಲಿ 5 ವಿಕೆಟ್ ಗೆ 336 ರನ್ ಪೇರಿಸಿತು. ಕಠಿಣ ಗುರಿ ಬೆಂಬತ್ತಿದ ಪಾಕಿಸ್ತಾನ ತಂಡ 48.2 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.
ಪಾಕಿಸ್ತಾನ ಪರ ಫಕರ್ ಜಮಾನ್ 144 ಎಸೆತಗಳಲ್ಲಿ 17 ಬೌಂಡರಿ ಮತ್ತು 6 ಸಿಕ್ಸರ್ ಸೇರಿದ 180 ರನ್ ಬಾರಿಸಿ ಔಟಾಗದೇ ಉಳಿದರು. ಇದು ಏಕದಿನ ಕ್ರಿಕೆಟ್ ನಲ್ಲಿ ಬಾರಿಸಿದ ಸತತ 3ನೇ ಶತಕ ಹಾಗೂ ವೈಯಕ್ತಿಕವಾಗಿ ಗರಿಷ್ಠ ಮೊತ್ತವಾಗಿದೆ. ನಾಯಕ ಬಾಬರ್ ಅಜಮ್ (65) ಉಪಯುಕ್ತ ಕಾಣಿಕೆ ನೀಡಿದರು.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಪರ ಡ್ರೈಲ್ ಮಿಚೆಲ್ 119 ಎಸೆತಗಳಲ್ಲಿ 8 ಬೌಂಡರಿ ಮತ್ತು 3 ಸಿಕ್ಸರ್ ಸೇರಿದ 129 ರನ್ ಬಾರಿಸಿದರೆ, ನಾಯಕ ಟಾಮ್ ಲಾಥಮ್ 85 ಎಸೆತಗಳಲ್ಲಿ 8 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 98 ರನ್ ಸಿಡಿಸಿದರು. ಇವರಿಬ್ಬರು ಮೂರನೇ ವಿಕೆಟ್ ಗೆ 178 ರನ್ ಜೊತೆಯಾಟ ನಿಭಾಯಿಸಿದ್ದು ವ್ಯರ್ಥವಾಯಿತು.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.