1000ನೇ ಐಪಿಎಲ್ ಪಂದ್ಯದಲ್ಲಿ ಶತಕ ಸಿಡಿಸಿದ ಜೈಸ್ವಾಲ್: ಮುಂಬೈಗೆ 213 ರನ್ ಗುರಿ! | Azad Times

5 months ago 4
Google News-KN Google News-EN Telegram Facebook

Azad Times News Desk.

Kannada Vahini Reporter

ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಯಶಸ್ವಿ ಜೈಸ್ವಾಲ್ 1000ನೇ ಐಪಿಎಲ್ ಟಿ-20 ಪಂದ್ಯದಲ್ಲಿ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ 213 ರನ್ ಗಳ ಕಠಿಣ ಗುರಿ ಒಡ್ಡಿದೆ.

ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 212 ರನ್ ಪೇರಿಸಿತು.

ಒಂದೆಡೆ ವಿಕೆಟ್ ಉರುಳುತ್ತಿದ್ದರೂ ನೆಲಕಚ್ಚಿ ಆಡಿದ ಯಶಸ್ವಿ ಜೈಸ್ವಾಲ್ 53 ಎಸೆತಗಳಲ್ಲಿ ಶತಕ ಪೂರೈಸಿದರು. ಅಂತಿಮವಾಗಿ ಜೈಸ್ವಾಲ್ 62 ಎಸೆತಗಳಲ್ಲಿ 16 ಬೌಂಡರಿ ಮತ್ತು 8 ಸಿಕ್ಸರ್ ಒಳಗೊಂಡ 124 ರನ್ ಬಾರಿಸಿ ಕೊನೆಯ ಓವರ್ ನಲ್ಲಿ ಔಟಾದರು.

- Advertisement -spot_img

Google News-KN Google News-EN Telegram Facebook
HTML smaller font

Azad Times.

Disclaimer: This story is auto-aggregated by a Syndicated Feed and has not been created or edited By Azad Times Staff.

This is the title of the web page
This is the title of the web page