11 ಸಾವಿರ ಎಕರೆ ವ್ಯಾಜ್ಯ ವಿಲೇವಾರಿಗೆ ನ್ಯಾಯಾಲಯದಿಂದಲೇ ಅದಾಲತ್: ಎಸ್.ಆರ್.ವಿಶ್ವನಾಥ್ | Azad Times

1 month ago 2
Google News-KN Google News-EN Telegram Facebook

Azad Times News Desk.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಸುಮಾರ 11 ಸಾವಿರ ಎಕರೆ ಜಾಗಗಳ ವ್ಯಾಜ್ಯ ವಿಲೇವಾರಿಗೆ ನ್ಯಾಯಾಲಯದಿಂದಲೇ ಅದಾಲತ್ ನಡೆಸುವಂತೆ ಬಿಡಿಎ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಬಿಡಿಎ ಅಧ್ಯಕ್ಷ ಎಸ್ ಆರ್ ವಿಶ್ವನಾಥ್, ವಿವಿಧ ಬಡಾವಣೆಗಳ ನಿರ್ಮಾಣಕ್ಕಾಗಿ ಬಿಡಿಎ ಕಾಲಕಾಲಕ್ಕೆ ಸಾವಿರಾರು ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು. ಆದರೆ, ಭೂ ಪರಿಹಾರ ಕಡಿಮೆ ಆಗಿದೆ ಎಂಬುದು ಸೇರಿದಂತೆ ಹಲವು ಕಾರಣಗಳಿಂದ ಭೂಮಾಲೀಕರು ಬಿಡಿಎ ಭೂಸ್ವಾಧೀನ ಪ್ರಕ್ರಿಯೆ ವಿರುದ್ಧ ವಿವಿಧ ನ್ಯಾಯಾಲಯಗಳಲ್ಲಿ ದಾವೆ ಹೂಡಿದ್ದಾರೆ. ಕೆಲವು ಪ್ರಕರಣಗಳು 30-40 ವರ್ಷಗಳಾದರೂ ಇತ್ಯರ್ಥವಾಗದೇ ಉಳಿದಿವೆ ಎಂದರು.

ಭೂಸ್ವಾಧೀನ ಪ್ರಕ್ರಿಯೆಗೆ ಹಿನ್ನಡೆ ಮತ್ತು ಭೂಮಾಲೀಕರಿಗೆ ಪರಿಹಾರ ಸಿಗುವಲ್ಲಿ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಾಧಿಕಾರ ಮತ್ತು ಭೂಮಾಲೀಕರಿಗೆ ಅನುಕೂಲವಾಗುವ ರೀತಿಯಲ್ಲಿ ಬಾಕಿ ಉಳಿದಿರುವ ಸುಮಾರು 11 ಸಾವಿರ ಎಕರೆ ಭೂ ವ್ಯಾಜ್ಯಗಳನ್ನು ವಿಶೇಷ ಅದಾಲತ್ತುಗಳನ್ನು ನ್ಯಾಯಾಲಯದಿಂದಲೇ ನಡೆಸಿ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೀಗೆ ಇತ್ಯರ್ಥವಾಗುವ ಪ್ರಕರಣಗಳಿಂದ ಬಿಡಿಎಗೆ ಆದಾಯ ಬರಲಿದೆ ಎಂದು ತಿಳಿಸಿದರು.

ಬಿಡಿಎ ಅಧ್ಯಕ್ಷರಾಗಿ ಎರಡು ವರ್ಷ ನಾಲ್ಕು ತಿಂಗಳ ಅಧಿಕಾರಾವಧಿಯಲ್ಲಿ ಸಂಸ್ಥೆಯ ಬೆಳವಣಿಗೆಗೆ ಪೂರಕವಾದ ಹಲವಾರು ಕ್ರಮಗಳನ್ನು ಕೈಗೊಂಡಿದ್ದೇನೆ. ಅಧಿಕಾರ ವಹಿಸಿಕೊಂಡ ತಕ್ಷಣ ಕೆಲವರ ವಿರೋಧದ ನಡುವೆಯೇ ಮಧ್ಯವರ್ತಿಗಳು ಮತ್ತು ಏಜೆಂಟರ ಹಾವಳಿಗೆ ಕಡಿವಾಣ ಹಾಕುವ ಕೆಲಸ ಮಾಡಿದ್ದೇನೆ ಎಂದರು.

ರೈತರ ಜಾಗದಲ್ಲಿ ನಿವೇಶನ
ಡಾ.ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಭೂಮಿ ನೀಡುವ ರೈತರಿಗೆ ಅವರದೇ ಜಮೀನಿನಲ್ಲಿ ಶೇ.40ರಂತೆ ಪರಿಹಾರಾರ್ಥ ನಿವೇಶನದ ಜಾಗವನ್ನು ಮೀಸಲಿಡಲಾಗುವುದು. ರೈತರು ತಮ್ಮದಾಗಿಸಿಕೊಳ್ಳಲು ಒಂದು ವರ್ಷ ಕಾಲಾವಕಾಶ ನೀಡಲಾಗುವುದು. ಈ ಸಂಬಂಧ ಹಂಚಿಕೆಗೆ ಹೊಸ ಮಾರ್ಗಸೂಚಿಯನ್ನು ಹೊರಡಿಸಲಾಗುವುದು ಎಂದು ತಿಳಿಸಿದರು.

ನನ್ನದೇ ಕ್ಷೇತ್ರವಾದ ಶಿವರಾಮ ಕಾರಂತ ಬಡಾವಣೆಯಲ್ಲಿ ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ನಿಲುವು ಕೈಗೊಳ್ಳಲಾಗಿದೆ. ರೈತರಿಗೆ ತಮ್ಮ ಭೂಮಿಯಲ್ಲೇ ಪರಿಹಾರ ನಿವೇಶನದ ಜಾಗವನ್ನು ಮೀಸಲಿಟ್ಟು ಅದರ ನೋಂದಣಿಗಾಗಿ ಒಂದು ವರ್ಷ ಕಾಲ ಸಮಯ ನೀಡಲಾಗುವುದು. ತಮ್ಮ ಜಮೀನಿನ ಬಗ್ಗೆ ಭಾವನಾತ್ಮಕ ಸಂಬಂಧಗಳಿರುತ್ತವೆ. ಹೀಗಾಗಿ ಅವರದೇ ಭೂಮಿಯಲ್ಲಿ ನೀಡಲಾಗುವುದು ಎಂದರು.

ಆರ್ಥಿಕ ಪರಿಸ್ಥಿತಿ ಉತ್ತಮ

ಕಳೆದ ಕೆಲವು ವರ್ಷಗಳಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಬಿಡಿಎ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಪರಿಣಾಮ ಆರ್ಥಿಕ ಸ್ವಾವಲಂಬನೆ ಸಾಧಿಸಿದೆ. ಆರ್ಥಿಕ ಸಂಪನ್ಮೂಲ ಕ್ರೋಢೀಕರಣದಿಂದ ಪ್ರಾಧಿಕಾರ ಖಾತೆಯಲ್ಲಿ 1,012 ಕೋಟಿ ರೂ. ಹಣವಿದೆ. 2020ರ ನವೆಂಬರ್ ತಿಂಗಳಲ್ಲಿ ಬಿಡಿಎ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡಾಗ ಬಿಡಿಎ ಖಾತೆಯಲ್ಲಿ ಇದ್ದದ್ದು ಕೇವಲ 260.20 ಕೋಟಿ ರೂ. ಮಾತ್ರ. ಆದರೆ, ಆರ್ಥಿಕ ಸಂಪನ್ಮೂಲ ಕ್ರೋಢೀಕರಣ, ಮಧ್ಯಂತರ ನಿವೇಶನಗಳ ಹರಾಜು, ಭೂ ಕಬಳಿಕೆದಾರರಿಂದ ವಶಪಡಿಸಿಕೊಳ್ಳಲಾದ ಪ್ರಾಧಿಕಾರದ ಆಸ್ತಿಗಳನ್ನು ಹರಾಜಿನಲ್ಲಿ ಹಂಚಿಕೆ ಮಾಡಿದ್ದರಿಂದ ಪ್ರಸ್ತುತ ಪ್ರಾಧಿಕಾರವು ಆರ್ಥಿಕವಾಗಿ ಸಮೃದ್ಧವಾಗಿದೆ ಎಂದರು.

ಹಳೆಯ ಲೇಔಟ್ಗಳ ಮೂಲ ಸೌಲಭ್ಯಗಳ ಅಭಿವೃದ್ಧಿಗೂ ಬಿಡಿಎ ಇದೀಗ ಒತ್ತು ನೀಡಿದ್ದು, ಅಭಿವೃದ್ಧಿ ಕೆಲಸಗಳ ಮುಗಿದ ಕೂಡಲೇ ಹಳೆಯ ಬಡಾವಣೆಗಳನ್ನು ಬಿಬಿಎಂಪಿಗೆ ಹಸ್ತಾಂತರಿಸಲಾಗುವುದು. ಈ ಸಂಬಂಧ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು.

Google News-KN Google News-EN Telegram Facebook
HTML smaller font

Azad Times.

Disclaimer: This story is auto-aggregated by a Syndicated Feed and has not been created or edited By Azad Times Staff.

This is the title of the web page
This is the title of the web page