ಇಂದಿನಿಂದ ನಿರುದ್ಯೋಗಿ ಪದವೀಧರರ ಖಾತೆಗೆ 3 ಸಾವಿರ ರೂ.
ಜಮಾ: 5ನೇ ಗ್ಯಾರಂಟಿ ‘ಯುವ ನಿಧಿ’ಗೆ ಇಂದು ಚಾಲನೆ

WhatsApp Group
Join Now
ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿಗೆ ಯುವನಿಧಿ ಯೋಜನೆಗೆ ಇಂದು ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಅದ್ದೂರಿ ಚಾಲನೆ ನೀಡಲಾಗುವುದು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.
ಯುವನಿಧಿ ಜಾರಿಯೊಂದಿಗೆ ಕಾಂಗ್ರೆಸ್ ಪಕ್ಷದ ಐದನೇ ಗ್ಯಾರಂಟಿ ಜಾರಿಯಾಗಲಿದೆ. ಸಮಾವೇಶದಲ್ಲಿ ಸುಮಾರು ಎರಡು ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ. 61,000ಕ್ಕೂ ಅಧಿಕ ನೋಂದಣಿಯಾಗಿದ್ದು, ನಿರುದ್ಯೋಗಿ ಪದವೀಧರರಿಗೆ ಮಾಸಿಕ 3000 ರೂ., ನಿರುದ್ಯೋಗಿ ಡಿಪ್ಲೋಮಾ ಪದವೀಧರರಿಗೆ ಮಾಸಿಕ 1500 ರೂಪಾಯಿಗಳನ್ನು ಅವರ ಖಾತೆಗೆ ಸಂದಾಯ ಮಾಡಲಾಗುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಾನುಭವಿಗಳ ಖಾತೆಗೆ ಹಣ ಬಿಡುಗಡೆ ಮಾಡಲಿದ್ದಾರೆ.
WhatsApp Group
Join Now
Telegram Group
Join Now