2023-24 ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವ ಜನರಿಗೆ ಬೆಂಗಳೂರಿನಲ್ಲಿ ವಿವಿಧ ತರಬೇತಿಗಳನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಜಿಮ್,  ಫಿಟ್ನೆಸ್, ಬ್ಯೂಟಿಷಿಯನ್ ತರಬೇತಿ, ವಿಡಿಯೋ ಗ್ರಾಫಿ ತರಬೇತಿ ಮತ್ತು ನಿರೂಪನೆ ಹಾಗೂ ವಾರ್ತಾ ವಾಚಕರ ತರಬೆತಿ ನೀಡಲು ಅರ್ಜಿಗಳನ್ನು ಸಲ್ಲಿಸಬಹುದು.

ಆಸಕ್ತರು ಜನವರಿ 20ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ 0836-2447424 ಸಂಪರ್ಕಿಸಬಹುದೆAದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.