Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್
ಶೀಘ್ರವೇ 5,151 ʻಸರ್ಕಾರಿ ಹುದ್ದೆʼಗಳಿಗೆ ನೇಮಕಾತಿ

WhatsApp Group
Join Now
ಬೆಂಗಳೂರು: ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಬಿಎಂಟಿಸಿಯಲ್ಲಿ 2,500ನಿರ್ವಾಹಕ ಹುದ್ದೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ 1,737 ನಿರ್ವಾಹಕರ ಹುದ್ದೆ ಸೇರಿದಂತೆ ರಾಜ್ಯದ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು 5,151 ಹುದ್ದೆಗಳಿಗೆ ನೇರ ನೇಮಕಾತಿಯಡಿ ಭರ್ತಿಗೆ ಮುಂದಾಗಿದೆ.
ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದ್ದು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ 50 ಸಹಾಯಕ ಎಂಜಿನಿಯರ್ ಹುದ್ದೆ, 14 ಪ್ರಥಮ ದರ್ಜೆ ಲೆಕ್ಕ ಸಹಾಯಕ ಹುದ್ದೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2,500 ನಿರ್ವಾಹಕ, 12 ಸಹಾಯಕ ಹುದ್ದೆಗಳು, 25 ಹಿರಿಯ ಸಹಾಯಕ ಹುದ್ದೆಗಳು, ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ 500 ತಾಂತ್ರಿಕ ಸಹಾಯಕ ಹುದ್ದೆಗಳು ಸೇರಿದಂತೆ ಒಟ್ಟು 727 ಹುದ್ದೆಗಳಿಗೆ ಶೀಘ್ರವೇ ಅಧಿಸೂಚನೆ ಪ್ರಕಟಿಸಲಿದೆ.
ಇಲ್ಲಿದೆ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿ
WhatsApp Group
Join Now
Telegram Group
Join Now