ಭಾರತದ ಅತಿ ಉದ್ದದ ಸಮುದ್ರ ಸೇತುವೆ ʻಅಟಲ್ ಸೇತುʼಗೆ ʻಇಂದು ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಇದೀಗ ಸಮುದ್ರ ಸೇತುವೆ ‘ಅಟಲ್ ಸೇತು’ ಪರಿಶೀಲಿಸಿದ ಪ್ರಧಾನಿ ಮೋದಿಯ ವಿಡಿಯೋ ವೈರಲ್ ಆಗಿದೆ.

ಪ್ರಧಾನಿ ಮೋದಿ ಸೇತುವೆಯಲ್ಲಿ ಅಡ್ಡಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ. ಸಾರಿಗೆ ಸಂಪರ್ಕಗಳನ್ನು ಹೆಚ್ಚಿಸುವಲ್ಲಿ ಮತ್ತು ಪ್ರಾದೇಶಿಕ ಅಭಿವೃದ್ಧಿಯನ್ನ ಉತ್ತೇಜಿಸುವಲ್ಲಿ ಅಟಲ್ ಸೇತುವಿನ ಮಹತ್ವವನ್ನ ಒತ್ತಿಹೇಳುವ ಮೂಲಕ ಪ್ರಧಾನಿ ಮೋದಿ ಸೇತುವೆಯಲ್ಲಿ ಸಂಚರಿಸಿದ್ದಾರೆ.

ಈ ಸೇತುವೆ 21.8 ಕಿ.ಮೀ ಉದ್ದದ 6 ಪಥದ ಸೇತುವೆಯಾಗಿದ್ದು, ಸಮುದ್ರದ ಮೇಲೆ ಸುಮಾರು 16.5 ಕಿ.ಮೀ ಉದ್ದ ಮತ್ತು ಭೂಮಿಯಲ್ಲಿ ಸುಮಾರು 5.5 ಕಿ.ಮೀ ಉದ್ದವಿದೆ. ಇದು ಭಾರತದ ಅತಿ ಉದ್ದದ ಸೇತುವೆ ಸಮುದ್ರ ಸೇತುವೆಯಾಗಿದೆ. ಈ ಸೇತುವೆಯು ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನವೀ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೇಗದ ಸಂಪರ್ಕವನ್ನು ಒದಗಿಸುತ್ತದೆ, ಮುಂಬೈನಿಂದ ಪುಣೆ, ಗೋವಾ ಮತ್ತು ದಕ್ಷಿಣ ಭಾರತಕ್ಕೆ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ.