ಎನ್.ಪಿ.ಎಸ್. ನೌಕರರನ್ನು ಹಳೆ ಪಿಂಚಣಿ ವ್ಯಾಪ್ತಿಯೊಳಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷಕರಿ ಇದನ್ನು ಸ್ವಾಗತಿಸಿದ್ದಾರೆ.

ಏಪ್ರಿಲ್ 1, 2006ಕ್ಕಿಂತ ಪೂರ್ವದಲ್ಲಿ ರಾಜ್ಯ ಸರ್ಕಾರದ ಅಧಿಸೂಚನೆ ಅನ್ವಯ ನೇಮಕಾತಿ ಹೊಂದಿದ ನೌಕರರನ್ನು ಹಳೆ ಪಿಂಚಣಿ ಯೋಜನೆಗೆ ಪರಿಗಣಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ ಎಂದು ಷಡಾಕ್ಷರಿ ತಿಳಿಸಿದ್ದಾರೆ.

ಜನವರಿ 10ರಂದು ಆರ್ಥಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್‌.ಕೆ. ಅತೀಕ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಮಾಡಲಾಗಿದ್ದು, ಸಿಎಂ ಅನುಮೋದನೆ ಪಡೆದು ಶೀಘ್ರದಲ್ಲಿ ಆದೇಶ ಹೊರಡಿಸುವುದಾಗಿ ಭರವಸೆ ನೀಡಿದ್ದರು. ಅಂತೆಯೇ ಮುಖ್ಯಮಂತ್ರಿಗಳು ಎನ್‌ಪಿಎಸ್ ಯೋಜನೆ ವ್ಯಾಪ್ತಿಯಲ್ಲಿರುವ ಸರ್ಕಾರಿ ನೌಕರರನ್ನು ಒಪಿಎಸ್ ನೌಕರರೆಂದು ಪರಿಗಣಿಸಲು ಅನುಮೋದನೆ ನೀಡಿದ್ದಾರೆ. ಶೀಘ್ರವೇ ಆದೇಶ ಹೊರಬೀಳಲಿದೆ ಎಂದು ಹೇಳಲಾಗಿದೆ.