ಉತ್ತರ ಪ್ರದೇಶ : ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ರಾಜ್ಯಾದ್ಯಂತ ಜ. 22ರವರೆಗೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ.

ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಕಡೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ರಾಜ್ಯದ ಎಲ್ಲಾ ಕಮೀಷನರೇಟ್ ಹಾಗೂ ಜಿಲ್ಲಾ ಎಸ್ಪಿಗಳಿಗೆ ಡಿಜಿ ಐಜಿಪಿ ಅಲೋಕ್ ಮೋಹನ್ ಸೂಚನೆ ನೀಡಿದ್ದು, ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದ್ದಾರೆ. ಬೆಂಗಳೂರು, ಶಿವಮೊಗ್ಗ, ಮಂಗಳೂರು, ಚಿಕ್ಕಮಗಳೂರು, ಹುಬ್ಬಳ್ಳಿ ಮತ್ತು ಉಡುಪಿ ಸೇರಿ ಕೆಲ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಸೂಚನೆ ನೀಡಲಾಗಿದೆ.

ಡಿಜಿ ಐಜಿಪಿ ಅಲೋಕ್ ಮೋಹನ್ ಅವರು ಸೋಮವಾರ ರಾಜ್ಯದ ಎಲ್ಲ ಪೊಲೀಸ್ ಕಮೀಷನರ್ ಗಳು ಹಾಗೂ ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ವರ್ಚುವಲ್ ಮೂಲಕ ಸಭೆ ನಡೆಸಿದರು.
ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆ ರಾಜ್ಯಾದ್ಯಂತ ಅಲರ್ಟ್ ಇರಲು ಕೇಂದ್ರ ಗುಪ್ತಚರ ಇಲಾಖೆಗಳಿಗೆ ಕೂಡ ಸೂಚನೆ ನೀಡಲಾಗಿದೆ.

ಇನ್ನೂ ರಾಮ ಮಂದಿರ ದ್ಘಾಟನೆಯಾದ ಮರುದಿನ ಜನವರಿ 23 ರಿಂದ ರಾಮ ಮಂದಿರ ಪ್ರವೇಶಕ್ಕೆ ಭಕ್ತರಿಗೆ ಅವಕಾಶ ಮಾಡಿಕೊಡಲಾಗುತ್ತದೆ.ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಜ. 22 ರಂದು ಭವ್ಯ ಕಾರ್ಯಕ್ರಮದೊಂದಿಗೆ ಪ್ರಾಣ ಪ್ರತಿಷ್ಟಾಪನೆ ನಡೆಯಲಿದೆ.