ರಾಜ್ಯ ಸರ್ಕಾರದ ವಿವಿಧ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಜ.30 ಕೊನೆಯ ದಿನ
.
ವಿಕಲಚೇತನರಿಗೆ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನವಾಗಿದೆ.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 05 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆಯಡಿ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಆನ್ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ. ಆದ್ದರಿಂದ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನೆ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ಕಿಟ್ ಯೋಜನೆ ಈ 05 ಯೋಜನೆಗಳಿಗೆ 2023-24 ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
(https://sevasindhu.karnataka.gov.in/…/DepartmentService… ಪೋರ್ಟಲ್ನಲ್ಲಿ ಅರ್ಜಿಗಳನ್ನು ಸಲ್ಲಿಸಲು ಜನವರಿ, 30 ಕೊನೆಯ ದಿನವಾಗಿದೆ. ಜಿಲ್ಲೆಯ ಅರ್ಹ ವಿಕಲಚೇತನರು ಅರ್ಜಿ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗೆ 03 ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರಾದ ಮಡಿಕೇರಿ ತಾಲ್ಲೂಕಿನ ರಾಜೇಶ್- 8073192914, ಸೋಮವಾರಪೇಟೆ ತಾಲ್ಲೂಕಿನ ಹರೀಶ್ ಟಿ.ಆರ್– 9008685129 ಹಾಗೂ ವಿರಾಜಪೇಟೆ ತಾಲ್ಲೂಕಿನ ಪ್ರಥನ್ ಕುಮಾರ್ ಸಿ.ಬಿ–9900883654 ನ್ನು ಸಂಪರ್ಕಿಸುವಂತೆ ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿಯ ದೂರವಾಣಿ ಸಂಖ್ಯೆ 08272-295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.