ಬಾಗಲಕೋಟೆ: ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೂಸಿನ ಮನೆ, ನರೇಗಾ ಯೋಜನೆಯಡಿ ನಡೆದ ಕಾಮಗಾರಿಗಳನ್ನು ಜಿಪಂ ಉಪಕಾರ್ಯದಶಿ೯ ಅಮರೇಶ್ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೊತೆಗೆ ಶಾಲಾ ಅಡುಗೆ ಕೋಣೆಗೆ ಭೇಟಿ ನೀಡಿ ಆಹಾರ ಧಾನ್ಯ, ಮಕ್ಕಳಿಗೆ ವಿತರಿಸುವ ಮಧ್ಯಾಹ್ನ ಬಿಸಿಯೂಟವನ್ನು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಮುರಳಿಧರ ದೇಶಪಾಂಡೆ , ಜಿಲ್ಲಾ ಐಇಸಿ ಸಂಯೋಜಕ ಅಜಯ್ ಸೂಳಿಕೇರಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಗಣ್ಣ ಕಳೋಳ್ಳಿ , ಐಇಸಿ ಸಂಯೋಜಕ ಬಸವರಾಜ ಕೊಪ್ಪದ , ತಾಂತ್ರಿಕ ಸಹಾಯಕ ಲಾಲಸಾಬ್ ಗುರಗುಣ್ಣಿ , ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.