Google News-KN | Google News-EN | Telegram |
ಒಡಿಶಾದ ಬಾಲ್ಸೂರ್ ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರೈಲುಗಳ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 261ಕ್ಕೇರಿದ್ದು, ಗಾಯಗೊಂಡವರ ಸಂಖ್ಯೆ 900ರ ಗಡಿ ದಾಟಿದೆ.
ಬಾಲಸೂರ್ ನಲ್ಲಿ 4 ರೈಲ್ವೆ ಹಳಿ ಇದ್ದು, ಮೂರು ರೈಲುಗಳ ನಡುವೆ ಡಿಕ್ಕಿ ಸಂಭವಿಸಿದೆ. ಪಶ್ಚಿಮ ಬಂಗಾಳದ ಶಾಲಿಮಾರ್ ನಿಂದ ತಮಿಳುನಾಡಿನ ಚೆನ್ನೈಗೆ ಹೊರಟ್ಟಿದ್ದ ಕೊರೊಮಂಡಲ್ ಎಕ್ಸ್ ಪ್ರೆಸ್ ರೈಲು ಬಾಸ್ಲೊರ್ ನ ಬಹಂಗಾ ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕೊರಮಂಡಲ್ ರೈಲಿನ 12 ಬೋಗಿಗಳು ಪಕ್ಕದ ಹಳಿಯ ಮೇಲೆ ಬಿದ್ದಿದೆ. ಅದೇ ಸಮಯದಲ್ಲಿ ಬೆಂಗಳೂರಿನಿಂದ ಹೌರಾ ಕಡೆ ಹೊರಟ್ಟಿದ್ದ ರೈಲು ಕೂಡ ಡಿಕ್ಕಿ ಹೊಡೆದಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಳವಾಗಿದೆ.
ಅಪಘಾತದ ತೀವ್ರತೆ ಎಷ್ಟು ಭೀಕರವಾಗಿತ್ತೆಂದರೆ ಬೋಗಿಗಳು ಎಲ್ಲೆಂದರಲ್ಲಿ ಬಿದ್ದಿವೆ. ಕೆಲವು ಬೋಗಿಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಜೆಸಿಬಿಗಳ ಮೂಲಕ ಬೋಗಿಗಳಲ್ಲಿ ಸಿಲುಕಿಕೊಂಡವರನ್ನು ರಕ್ಷಿಸಲಾಗುತ್ತಿದೆ. ವಾಯುಪಡೆ ವಿಮಾನ ಮತ್ತು ಹೆಲಿಕಾಫ್ಟರ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ.
ಘಟನೆಗೆ ಪ್ರಧಾನಿ ಮೋದಿ ಆಘಾತ ವ್ಯಕ್ತಪಡಿಸಿದ್ದು, ಒಡಿಶಾದ ಆಸ್ಪತ್ರೆಗಳಿಗೆ ಭೇಟಿ ನೀಡಿ ಗಾಯಾಳುಗಳನ್ನು ಸಂತೈಸಲಿದ್ದಾರೆ. ಇದೇ ವೇಳೆ ಪ್ರಧಾನಿ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ ಕರೆಯಲಾಗಿದೆ.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.