kannadavahini karnataka-news

ರಣಜಿ ಟ್ರೋಫಿ: ದೇವದತ್ ಪಡಿಕಲ್ ಶತಕ: ಕರ್ನಾಟಕಕ್ಕೆ ಭಾರೀ ಮುನ್ನಡೆ ಮಧ್ಯಮ ಕ್ರಮಾಂಕದಲ್ಲಿ ದೇವದತ್ ಪಡಿಕಲ್ ಸಿಡಿಸಿದ ಶತಕದ ನೆರವಿನಿಂದ ಕರ್ನಾಟಕ ತಂಡ ರಣಜಿ ಟ್ರೋಫಿ ಪಂದ್ಯದಲ್ಲಿ ಜಾರ್ಖಂಡ್ ವಿರುದ್ಧ ಮೊದಲ ಇನಿಂಗ್ಸ್ ನಲ್ಲಿ ಮುನ್ನಡೆ ಪಡೆದಿದೆ. ಜಮ್ಶೆಡ್ ಪುರ್ ನಲ್ಲಿ ನಡೆಯುತ್ತಿರುವ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಜಾರ್ಖಂಡ್ ತಂಡವನ್ನು 164 ರನ್ ಗಳಿಗೆ ಆಲೌಟ್ ಮಾಡಿದ ಕರ್ನಾಟಕ ತಂಡ ಮೊದಲ ಇನಿಂಗ್ಸ್ ನಲ್ಲಿ 300 ರನ್ ಗೆ ಪತನಗೊಂಡಿತು. 136 ರನ್ ಗಳ ಭಾರೀ ಹಿನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ ಜಾರ್ಖಂಡ್ ದಿನದಾಂತ್ಯಕ್ಕೆ ಎರಡನೇ ಇನಿಂಗ್ಸ್ ನಲ್ಲಿ 2 ವಿಕೆಟ್ ಗೆ 85 ರನ್ ಗಳಿಸಿದೆ. ಮುನ್ನಡೆ ಪಡೆಯಬೇಕಾದರೆ 51 ರನ್ ಪಡೆಯಬೇಕಾಗಿದೆ. ಕರ್ನಾಟಕದ ಪರ ದೇವದತ್ ಪಡಿಕಲ್ 175 ಎಸೆತಗಳಲ್ಲಿ 7 ಬೌಂಡರಿ ಮತ್ತು 5 ಸಿಕ್ಸರ್ ಸೇರಿದ 114 ರನ್ ಬಾರಿಸಿ ತಂಡವನ್ನು ಆಧರಿಸಿದರು. ಕೆಳ ಕ್ರಮಾಂಕದಲ್ಲಿ ಬಿಆರ್ ಶರತ್ 60 ರನ್ ಗಳಿಸಿ ತಂಡದ ಮೊತ್ತ 300ರ ಗಡಿ ದಾಟಿಸಿದರು. | Azad Times
This is the title of the web page
This is the title of the web page